News Karnataka Kannada
Sunday, April 28 2024
ಬೆಂಗಳೂರು ನಗರ

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮೆಯ ತಾಯಿಯನ್ನು ಕೊಂದ ಪ್ರಿಯಕರ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit :

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರಿಯತಮೆಯ ತಾಯಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ನಂಜಮ್ಮ(50) ಮೃತಪಟ್ಟವರು. ಹಲವು ವರ್ಷಗಳಿಂದ ಗೋವಿಂದರಾಜ ನಗರದ ಎಸ್.ವಿ.ಜಿ. ನಗರದಲ್ಲಿ ವಾಸವಾಗಿದ್ದ ನಂಜಮ್ಮ ಅವರನ್ನು ಗುರುವಾರ ರಾತ್ರಿ ಆಕೆಯ ಪುತ್ರಿಯ ಪ್ರಿಯಕರ ರಾಘವೇಂದ್ರ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆನೇಕಲ್ ತಾಲೂಕಿನ ರಾಘವೇಂದ್ರನೊಂದಿಗೆ ನಂಜಮ್ಮನ ಮನೆ ಸಮೀಪದಲ್ಲಿಯೇ ವಾಸವಾಗಿದ್ದ ಪುತ್ರಿ ಸಂಬಂಧ ಬೆಳೆಸಿದ್ದಳು. ಇವರ ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ನಂಜಮ್ಮ ರಾಘವೇಂದ್ರನಿಂದ ದೂರವಾಗುವಂತೆ ಮಗಳಿಗೆ ಒತ್ತಾಯಿಸಿದ್ದರು. ಇದೇ ವಿಚಾರವಾಗಿ ನಂಜಮ್ಮನೊಂದಿಗೆ ಜಗಳವಾಡಿದ ರಾಘವೇಂದ್ರ ಗುರುವಾರ ರಾತ್ರಿ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು