News Karnataka Kannada
Thursday, May 02 2024
ಬೆಂಗಳೂರು ನಗರ

ಅದ್ಧೂರಿ ಜನ್ಮದಿನ ಆಚರಣೆ ನನಗೆ ಇಷ್ಟವಿಲ್ಲ; ಹೆಚ್.ಡಿ.ಕುಮಾರಸ್ವಾಮಿ

Hdk Swamy Bangalore 2 7 21
Photo Credit :

ಬೆಂಗಳೂರು,ಡಿ.15 : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್-19 ಕಾರಣಕ್ಕೆ ಹುಟ್ಟುಹಬ್ಬ ಆಚರಣೆ ಬೇಡವೆಂದು ಅವರು ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ.

ಡಿ.16 (ನಾಳೆ) ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ.

ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ.

ಅದ್ಧೂರಿ ಹುಟ್ಟುಹಬ್ಬ ನನಗೆ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ದೃಢ ಸಂಕಲ್ಪದೊಂದಿಗೆ ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದು ಹೆಚ್ಡಿಕೆ ಅವರು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು