ಅನಿರೀಕ್ಷಿತ ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಮಾತು

ಬೆಂಗಳೂರು: ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 3 ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ವಿನ ಮಳೆಯಾಗಿ, ಬೆಳೆ ಹಾನಿಯಾಗಿದೆ. ಹಲವಾರು ಸಂಪರ್ಕ ರಸ್ತೆ, ಕೆಲವೆಡೆ ಸಾವುಗಳಾಗಿರುವುದು ಸಮೀಕ್ಷೆಯ ವರದಿಯಲ್ಲಿ ಉಲ್ಲೇಖವಾಗಿದೆ ಎಂದರು.

ಜುಲೈ, ಆಗಸ್ಟ್, ಸೆಪ್ಟೆಂಬರ್ ಮಾಹೆಗಳಲ್ಲಿ ಸುಮಾರು 3 ಲಕ್ಷ ರೈತರ ಬೆಳೆಹಾನಿಯಾಗಿದ್ದರಿಂದ ಪರಿಹಾರ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಾಕಿಯಿದ್ದ ₹ 130 ಕೋಟಿಗಳನ್ನು ಡಿಬಿಟಿ ಮೂಲಕ ವಿತರಿಸಲು ಸೂಚಿಸಲಾಗಿದೆ
ಎಂದು ತಿಳಿಸಿದರು.

ಮೊನ್ನೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೊ ಸಂವಾದದಲ್ಲಿ ಸಮೀಕ್ಷೆಯ ವರದಿಯನ್ನು ಕೂಡಲೇ ಸಲ್ಲಿಸಲು ಸೂಚಿಸಲಾಗಿದೆ. ನಿರಂತರ ಮಳೆಯಿಂದಾಗಿ ಸಮೀಕ್ಷೆ ನಡೆಸುವುದೂ ಕಷ್ಟವಾಗಿದೆ. ಮಳೆ ತಗ್ಗಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಕೆಲವೆಡೆ ಸಮೀಕ್ಷೆಗಳು ಪ್ರಾರಂಭವಾಗಿದೆ. ಪರಿಹಾರ ಪೋರ್ಟಲ್ ನಲ್ಲಿ ಮಾಹಿತಿ ಅಪ್ ಲೋಡ್ ಆಗುತ್ತಿದೆ ಎಂದ ಸಿಎಂ, ಹಲವು ಸಚಿವರು ಆಯಾ ಜಿಲ್ಲೆಗಳಲ್ಲಿ ಇದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆಯುವ ಅಗತ್ಯವಿದೆ. ಈ ಬಗ್ಗೆ ಆಯೋಗಕ್ಕೆ ಪತ್ರವನ್ನು ಬರೆಯಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಬಗ್ಗೆ ಸರಕಾರಕ್ಕಿದೆ ಕಾಳಜಿ: ನಗರ ಪ್ರದಕ್ಷಿಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎಚ್.ಎಸ್.ಆರ್. ಬಡಾವಣೆ, ರಾಜರಾಜೇಶ್ವರಿ ನಗರ, ಮಡಿವಾಳ ಕೋರಮಂಗಲಗಳಿಗೆ ಈಗಾಗಲೇ ಭೇಟಿ ನೀಡಿದೆ. ಬೆಂಗಳೂರಿನ ಬಗ್ಗೆ ಖಂಡಿತವಾಗಿ ಸರಕಾರಕ್ಕೆ ಕಾಳಜಿ ಇದೆ. ಮಳೆ ನಿಂತ ಕೂಡಲೇ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದೆ ಎಂದು ಹೇಳಿದರು.

ಇಂದು ಸಂಜೆ ಅಧಿಕಾರಿಗಳ ತುರ್ತು ಸಭೆ: ಅನಿರೀಕ್ಷಿತ ಮಳೆಯಿಂದ ಉಂಟಾದ ಹಾನಿ ಕುರಿತು ಚರ್ಚಿಸುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುರ್ತು ಸಭೆಯನ್ನು ಕರೆದಿದ್ದಾರೆ. ಸಂಜೆ 7 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಗೆ ಹಲವು ಇಲಾಖೆಗಳ ಮುಖ್ಯಸ್ಥರು ಭಾಗಿಯಾಗಲು ಸೂಚಿಸಲಾಗಿದೆ.

ಗೃಹ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಕೃಷಿ, ಸಣ್ಣ ನೀರಾವರಿ, ವಸತಿ ಇಲಾಖೆಗಳು ಹಾಗೂ ಕೆ.ಎಸ್.ಡಿ.ಎಂ.ಎ. ಮುಖ್ಯಸ್ಥರಿಗೆ ಸಭೆಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೂ ಸಭೆಗೆ ಆಹ್ವಾನಿಸಲಾಗಿದೆ.

ವಿವಿಧ ಜಿಲ್ಲೆಗಳಿಂದ ಬಂದ ವರದಿಗಳನ್ನು ಪುನರ್ ಪರಿಶೀಲಿಸಿ, ನೆರವು ನೀಡುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ.

Sneha Gowda

Recent Posts

ನಾಳೆ ರಾತ್ರಿಯಿಂದ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಗಳಿಂದ ಮುಷ್ಕರ

108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ…

9 mins ago

ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ಖಂಡಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ…

10 mins ago

“ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ”; ಸ್ವಿಗ್ಗಿಯ ವೈರಲ್‌ ಪೋಸ್ಟ್​​​

ಅಗತ್ಯಕ್ಕಿಂತ ಹೆಚ್ಚು ಅನ್ನವನ್ನು ತೆಗೆದುಕೊಂಡು ನಂತರ ಅದನ್ನು ಬಿಸಾಡಬೇಡಿ, ಅನ್ನ ದೇವರಿಗೆ ಸಮಾನ ಎಂದು ಹೇಳಿದ್ರೂ ಕೂಡಾ, ಈ ಮಾತುಗಳಿಗೆ…

20 mins ago

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ…

30 mins ago

ದುಷ್ಕರ್ಮಿಗಳಿಂದ ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

32 mins ago

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ…

52 mins ago