ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ  ಆರೋಪ: ಇಬ್ಬರು ಮಹಿಳೆಯರು ಸೇರಿ 6 ಮಂದಿ ಬಂಧನ

ಬೆಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ  ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ 6 ಮಂದಿಯನ್ನು ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಅಗರ ನಿವಾಸಿ ಕಲಾವತಿ (52), ಬಂಡೇಪಾಳ್ಯ ನಿವಾಸಿ ರಾಜೇಶ್ವರಿ (50) ಮತ್ತು ಸಂತ್ರಸ್ತೆ ಮೇಲೆ ಐದಾರು ದಿನಗಳ ಕಾಲ ಅತ್ಯಾಚಾರ ಎಸಗಿದ ಹೊಸೂರಿನ ಆಟೋ ಮೊಬೈಲ್‌ ಕಂಪನಿಯ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಕೇಶವಮೂರ್ತಿ (47), ಕೋರಮಂಗಲದ ಸತ್ಯರಾಜು (43), ಯಲಹಂಕದ ಶರತ್‌ (38) ಹಾಗೂ ಬೇಗೂರಿನ ರಫೀಕ್ (38) ಬಂಧಿತರು

ಆರೋಪಿಗಳು ನಗರದ 16 ವರ್ಷದ ಸಂತ್ರಸ್ತೆ ಮೇಲೆ ಐದಾರು ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಅಪಹರಣ, ಮಾನವ ಕಳ್ಳ ಸಾಗಾಣಿಕೆ, ಅತ್ಯಾಚಾರ, ವೇಶ್ಯಾವಾಟಿಕೆ, ಜೀವ ಬೆದರಿಕೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಬೇರೆ ಜಿಲ್ಲೆಯಿಂದ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದಿರುವ ಸಂತ್ರಸ್ತೆ ಕುಟುಂಬ ನಗರದಲ್ಲಿ ವಾಸವಾಗಿದ್ದು, ಆಕೆಯ ಪೋಷಕರು ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ಮಧ್ಯೆ ಸಂತ್ರಸ್ತೆ ಕೂಡ ಶಾಲೆಗೆ ಹೋಗುತ್ತಾ, ರಾಜೇಶ್ವರಿ ಬಳಿ ಹೊಲಿಗೆ ಯಂತ್ರದ ತರ ಬೇತಿ ಪಡೆಯಲು ಹೋಗುತ್ತಿದ್ದಳು. ಈ ವೇಳೆ ರಾಜೇಶ್ವರಿ, ಸಂತ್ರಸ್ತೆಗೆ ಮನೆಗೆ ಕರೆದೊಯ್ದು ಜ್ಯೂಸ್‌ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ಬೆರೆಸಿದ್ದಾಳೆ. ನಂತರ ಕೇಶವಮೂರ್ತಿ ಅತ್ಯಾಚಾರ ಎಸಗಿದ್ದಾನೆ.

ಎಚ್ಚರಗೊಂಡ ಬಳಿಕ ಸಂತ್ರಸ್ತೆಗೆ ತಲೆ ಸುತ್ತು ಬಂದು ಬಿದ್ದಿದ್ದೆ ಎಂದು ಹೇಳಿ, ಸ್ನಾನ ಮಾಡಿಸಿ ಕಳುಹಿಸಿದ್ದಳು. ಎರಡು ದಿನಗಳ ಬಳಿಕ ಮತ್ತೆ ಸಂತ್ರಸ್ತೆಗೆ ರಾಜೇಶ್ವರಿ ಕರೆ ಮಾಡಿ ಬರುವಂತೆ ಸೂಚಿಸಿದ್ದಾರೆ. ಆದರೆ, ಸಂತ್ರಸ್ತೆ ಒಪ್ಪದ್ದಿದ್ದಾಗ, ಈ ವಿಚಾರವನ್ನು ಪೋಷಕರಿಗೆ ಹೇಳುವುದಾಗಿ ಬೆದರಿಸಿ, ಐದಾರು ದಿನಗಳ ಕಾಲ ಮನೆಗೆ ಕರೆಸಿಕೊಂಡಿದ್ದು ಆಗಲೂ ಸತ್ಯರಾಜು, ಶರತ್‌ ಮತ್ತು ರಫೀಕ್‌ ಅತ್ಯಾಚಾರ ಎಸಗಿಸಿದ್ದಾರೆ. ಅವರಿಂದ ರಾಜೇಶ್ವರಿ ಹಣ ಸಹ ಪಡೆದುಕೊಂಡಿದ್ದಳು ಎಂದು ಹೇಳಲಾಗಿದೆ. ಇದಾದ ನಂತರವೂ ಕರೆ ಮಾಡಿ, ಮತ್ತೂಬ್ಬ ಗ್ರಾಹಕ ಬಂದಿರುವುದಾಗಿ ಹೇಳಿದಾಗ ಸಂತ್ರಸ್ತೆ ನಿರಾಕರಿಸಿ ದ್ದರು. ಅಲ್ಲದೆ, ಈ ವಿಚಾರವನ್ನು ಪೋಷಕರಿಗೆ ಹೇಳಿದ್ದಾಳೆ.

ಕೂಡಲೇ ಪೋಷಕರು ಪೊಲೀಸ್‌ ಠಾಣಗೆ ದೂರು ನೀಡಿದ್ದಾರೆ. 36 ಗಂಟೆಯಲ್ಲೇ ಆರೋಪಿಗಳ ಬಂಧನ: ಕಳೆದ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ, ಮಡಿವಾಳ ಎಸಿಪಿ ಸುಧೀರ್‌ ಎಂ. ಹೆಗಡೆ ಮತ್ತು ಎಚ್‌ಎಸ್‌ಆರ್‌ ಲೇಔಟ್‌ ಠಾಣಾಧಿಕಾರಿ ಮುನಿರೆಡ್ಡಿ ಆರೋಪಿಗಳ ಬಂಧನಕ್ಕೆ ತಡರಾತ್ರಿಯೇ 4 ವಿಶೇಷ ತಂಡ ರಚಿಸಿ ದ್ದರು. ಕ್ಷೀಪ್ರ ಕಾರ್ಯಾಚರಣೆ ನಡೆಸಿದ ತಂಡಗಳು ಹೊಸೂರು ಸೇರಿ ವಿವಿಧೆಡೆ ಇದ್ದ ಆರೋಪಿಗಳನ್ನು ಕೇವಲ 36 ಗಂಟೆಯಲ್ಲೇ ಬಂಧಿಸಿದೆ. ವಿಶೇಷ ತಂಡದ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Gayathri SG

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

10 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

33 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

51 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago