News Karnataka Kannada
Monday, May 06 2024
ಬೆಂಗಳೂರು ನಗರ

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸೂಕ್ತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು : ಸಿಎಂ ಬೊಮ್ಮಾಯಿ

Cm Bommai
Photo Credit : News Kannada

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡುಬಡತನದಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಬೇಕು.

21 ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜಗತ್ತು ಬದಲಾವಣೆಯ ರೀತಿಯನ್ನು ಗ್ರಹಿಸಿ, ಮಕ್ಕಳನ್ನು ಸಿದ್ಧಪಡಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರ ಹಾಗೂ ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಹಾಗೂ ಸವಲತ್ತುಗಳನ್ನು ಕಲ್ಪಿಸಿ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತ ಜನಾಂಗದ ಕಟ್ಟಕಡೆಯ ವ್ಯಕ್ತಿಯನ್ನು ಬಡವರನ್ನು ಗಮನದಲ್ಲಿರಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ಕಾರ್ಯಕ್ರಮಗಳಿರಬೇಕು. ಮಕ್ಕಳು ಮಾನವ ಶಕ್ತಿ. ಪುಸ್ತಕ ಹಿಡಿಯುವ ಚಿಕ್ಕಮಕ್ಕಳ ಕೈಯಲ್ಲಿ ಭಾರದ ಮೂಟೆಗಳಿವೆ. ಉದ್ಯೋಗದ ಬಗ್ಗೆ ಮಕ್ಕಳು ವಿಶೇಷ ಆಸಕ್ತಿ ಹೊಂದಿದ್ದು, ಹೆಚ್ಚಿನ ಮಾಹಿತಿ ದೊರೆಯಬೇಕು. ಪ್ರಮುಖವಾಗಿ 8,9,10 ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ, ಮಕ್ಕಳಿಗೆ ಐಟಿ, ಇಂಜಿನಿಯರಿಂಗ್, ಐಟಿಐ, ಐಎಎಸ್, ಐಪಿಎಸ್ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಬೇಕು.

ಅಲ್ಪಸಂಖ್ಯಾತ ಮಕ್ಕಳ ಚಿಂತನೆ ಅವರ ಶಿಕ್ಷಣ ಹಾಗೂ ವೃತ್ತಿಯ ದಿಸೆಯಲ್ಲಿ ಇರಬೇಕು. ಅಲ್ಪಸಂಖ್ಯಾತರ ಹಾಗೂ ಬಡವರ ಮಕ್ಕಳು ಸೂಕ್ತ ವೃತ್ತಿ ಮಾರ್ಗದರ್ಶನದಿಂದ ಉತ್ತಮ ಶಿಕ್ಷಣ ಹಾಗೂ ಉದ್ಯೋಗ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗುವ ಜೊತೆಗೆ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು