ಬೆಂಗಳೂರು: ದಕ್ಷಿಣಾ ಆಫ್ರಿಕಾದಿಂದ ಆಗಮಿಸಿರುವ ಆನೇಕಲ್ ತಾಲೂಕಿನ ಬಳ್ಳೂರು ಅಪಾರ್ಟ್ಮೆಂಟ್ ನಿವಾಸಿಯೊಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದೆ.
ಸೋಂಕಿತ ವ್ಯಕ್ತಿ ಕಳೆದ 23ರಂದು ದಕ್ಷಿಣಾ ಆಫ್ರಿಕಾದಿಂದ ವಾಪಾಸ್ಸಾಗಿದ್ದ ಆತನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗಿತ್ತು.
ವಿಮಾನ ನಿಲ್ದಾಣದಿಂದ ಆತ ನೇರವಾಗಿ ಬಳ್ಳೂರು ಅಪಾರ್ಟ್ಮೆಂಟ್ಗೆ ಆಗಮಿಸಿದ್ದ. ಅದರೆ, ಆತನಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಆತನನ್ನು ಆರೋಗ್ಯ ಇಲಾಖೆ ಅಧಿಕಾರಿಗಳು 24ನೇ ತಾರೀಖು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಮುನ್ನೆಚ್ಚರಿಕೆ ಕ್ರಮವಾಗಿ ಬಳ್ಳೂರು ಅಪಾರ್ಟ್ಮೆಂಟ್ ಬಳಿ ಬೀಡುಬಿಟ್ಟಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.