ಆರ್ಥಿಕ ಸಂಕಷ್ಟದಿಂದ ಪಾರಾಗಲು ಕೆಎಸ್‌ಆರ್‌ಟಿಸಿಯ ನಾಲ್ಕು ಸಾರಿಗೆ ನಿಗಮಗಳ ವೀಲಿನಕ್ಕೆ ಆಗ್ರಹ

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಪಾರಾಗಲು ಕೆಎಸ್‌ಆರ್‌ಟಿಸಿಯ ನಾಲ್ಕು ಸಾರಿಗೆ ನಿಗಮಗಳನ್ನು ಒಂದೇ ನಿಗಮವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲಾಗಿದೆ.ಕೊರೊನಾ ಕಾಣಿಸಿಕೊಂಡ ನಂತರ ಸಾರಿಗೆ ನಿಗಮ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.ಬಸ್‍ಗಳ ನಿರ್ವಹಣೆ, ಡಿಪೋಗಳ ಖರ್ಚುವೆಚ್ಚ, ನೌಕರರ ಸಂಬಳಕ್ಕೂ ಹಣವಿಲ್ಲದೆ ನಿಗಮಗಳು ಪರದಾಡುವಂತಾಗಿದೆ. ಇದುವರೆಗೂ ಸಾರಿಗೆ ನಿಗಮಗಳು 4500 ಕೋಟಿ ರೂ.ಗಳ ನಷ್ಟ ಎದುರಿಸಿದೆ.

ಹಿರಿಯ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸ ಮೂರ್ತಿ ನೇತೃತ್ವದ ಸಾರಿಗೆ ನಿಗಮಗಳ ಪುನರಚನಾ ಸಮಿತಿಗೆ ನೌಕರರ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿಕೊಂಡಿದ್ದಾರೆ.1997 ರಿಂದ ಇಲ್ಲಿಯವರೆಗೆ ಪಿಎಫ್, ಎಲ್‍ಐಸಿ, ನಿವೃತ್ತಿವೇತನ ಸೇರಿದಂತೆ 1700 ಕೋಟಿ ರೂ.ಗಳನ್ನು ನೌಕರರಿಗೆ ನೀಡಬೇಕಾಗಿದೆ.

ಹೀಗಾಗಿ ನಾಲ್ಕು ನಿಗಮಗಳನ್ನು ವೀಲಿನಗೊಳಿಸಿ ಆಡಳಿತದ ದೃಷ್ಟಿಯಿಂದ ಎಲ್ಲ ನಿಗಮಗಳನ್ನು ಒಂದುಗೂಡಿಸುವಂತೆ ಕೆಎಸ್‍ಆರ್‍ಟಿಸಿ ಸ್ಪಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್ ಮನವಿ ಮಾಡಿಕೊಂಡಿದ್ದಾರೆ.

ಸಾರಿಗೆ ನೌಕರರ ಈ ಬೇಡಿಕೆಗೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರಿಂದಲೂ ಬೆಂಬಲ ವ್ಯಕ್ತವಾಗಿದ್ದು ಈ ಕುರಿತಂತೆ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

1961ರಲ್ಲಿ ಆರಂಭವಾಗಿದ್ದ ಕೆಎಸ್‍ಆರ್‍ಟಿಸಿ ಸಂಸ್ಥೆಯನ್ನು 1997ರಲ್ಲಿ ನಾಲ್ಕು ವಿಭಾಗಗಳನ್ನಾಗಿ ವಿಭಜಿಸಲಾಗಿತ್ತು. ಆಗಲೂ ನೌಕರರು ವಿಭಜನೆ ಬೇಡ ಎಂದು ವಾದ ಮಂಡಿಸಿದ್ದರು.

Swathi MG

Recent Posts

ಚಾಮರಾಜನಗರ: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

ಸಿಡಿಲು ಬಡಿದು ಮೂರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಚೆನ್ನೂರು ಗ್ರಾಮದಲ್ಲಿ ನಡೆದಿದೆ.

16 mins ago

ರಾಯ್‌ಬರೇರಿಯಲ್ಲಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ; ಕಿಶೋರಿ ಶರ್ಮಾ ಪಾಲಾದ ಅಮೇಥಿ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರು ಕಾಂಗ್ರೆಸ್‌ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಡೆಗೂ ತೆರೆ ಬಿದ್ದಿದ್ದು, ರಾಹುಲ್‌ ಗಾಂಧಿ ತಮ್ಮ…

22 mins ago

ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ನಿನ್ನೆಯಿಂದ ಮೂರ್ತಿಯ ಉಳಿದ…

46 mins ago

ಅನ್ನದಾತರ ಕನಸಿಗೆ ಬರೆ ಎಳೆದ ಗಾಳಿ ಮಳೆ: ಎಕರೆಗಟ್ಟಲೇ ಬಾಳೆ ಫಸಲು ನಾಶ

ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವರುಣಾಗಮನದಿಂದಾಗಿ ತಂಪಿನ…

46 mins ago

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದೆ ಸಿಎಂ: ಆರ್ ಅಶೋಕ್ ಆಕ್ರೋಶ

ಎಲ್ಲಾ ಎಪಿಸೋಡ್‌ಗಳನ್ನ ನೋಡಿದಾಗ ಸಿದ್ದರಾಮಯ್ಯನವರೇ ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿದಾರೆ ಅನಿಸುತ್ತೆ ಎಂದು ಬೀದರ್‌ನಲ್ಲಿ ವಿಪಕ್ಷ ನಾಯಕ ಆರ್…

1 hour ago

ಇಂದು ಮಧ್ಯಾಹ್ನದಿಂದಲೇ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆ

ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…

1 hour ago