ನಾನು ಆರ್ಎಸ್ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು. ನನಗೂ ಆರ್ಎಸ್ಎಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ. ಆರ್ಎಸ್ಎಸ್ ಬಗ್ಗೆ ಹೊಗಳಿದ್ದೇನೆ ಎಂದು ಹೇಳುತ್ತಿರುವುದು ಸುಳ್ಳು. ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್.ಕೆ.ಅಡ್ವಾಣಿ ಬಂದಾಗ ನಾವು ಸಮಾಲೋಚನೆ ಮಾಡಿದ್ದೆವು. ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲಿಗೆ ಹೋಗಿದ್ದರ ಬಗ್ಗೆ ಚರ್ಚೆ ಮಾಡಿದ್ದೆವು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ನಡೆದಿತ್ತು. ನನ್ನ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ನಡೆದಿತ್ತು. ಸಭೆ ದುರುಪಯೋಗ ಮಾಡುವುದು ಸರಿಯಲ್ಲವೆಂದು ಹೇಳಿದ್ದೆ. ಅಂದು ನಡೆದ ಸಭೆಯಲ್ಲೇ ನಾನು ಹೇಳಿದ್ದೆ. ತುರ್ತುಪರಿಸ್ಥಿತಿ ಬೆಂಬಲಿಸ್ತೇವೆಂದು ಹಲವರು ಬರೆದುಕೊಟ್ಟಿದ್ರು ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.