ಬೆಂಗಳೂರು: ಪೊಲೀಸರ ತನಿಖಾ ವರದಿಯನ್ನು ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್ ಸಾರಿದೆ. ಕೇಸ್ವೊಂದರಲ್ಲಿ ಸಿ ಐ ಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಸಿಐಡಿ ಮಾಹಿತಿ ಅಧಿಕಾರಿಯು ಮಾಹಿತಿ ಹಕ್ಕಿನಡಿ ಬಿ ರಿಪೋರ್ಟ್ ಪ್ರತಿ ನೀಡಲು ನಿರಾಕರಿಸಿದ್ದರು. ಆಗ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯೋಗ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಾಹಿತಿ ಅಧಿಕಾರಿ ರಿಟ್ ಅರ್ಜಿ ಸಲ್ಲಿಸಿದ್ದರು.
ಇದೀಗ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.