ಆಸಿಡ್ ದಾಳಿ: ಯುವತಿಯ ಚಿಕಿತ್ಸೆಗೆ ₹1 ಲಕ್ಷ ಪರಿಹಾರ ಘೋಷಿಸಿದ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಯುವಕನಿಂದ ಆಸಿಡ್ ದಾಳಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ‌ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ವೈಯಕ್ತಿಕವಾಗಿ ₹ 1ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ‌ ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ಅವರು ನೀಡಿದ್ದಾರೆ.

ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ‌ ಕೃತ್ಯ ಎಂದು ನಿರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ ಎಂದು ಹೇಳಿದ್ದಾರೆ.

Sneha Gowda

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

9 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

24 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

48 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

60 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago