News Karnataka Kannada
Tuesday, May 07 2024
ಬೆಂಗಳೂರು ನಗರ

ಆಸ್ಪತ್ರೆಯಿಂದಲೇ ಕಾರ್ಯಭಾರ ನಿರ್ವಹಿಸುತ್ತಿರುವ ಸಿಎಂ ಯಡಿಯೂರಪ್ಪ

Photo Credit :

ಆಸ್ಪತ್ರೆಯಿಂದಲೇ ಕಾರ್ಯಭಾರ ನಿರ್ವಹಿಸುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಕೆಲಸಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಯಡಿಯೂರಪ್ಪ ಅವರು ಬೆಳಗ್ಗೆ 6 ಗಂಟೆಗೆ ಏಳುತ್ತಾರೆ ಮತ್ತು ರಾತ್ರಿ 10 ಗಂಟೆ ತನಕ ಕೆಲಸ ಮಾಡುತ್ತಿದ್ದಾರೆ. ತನ್ನ ಕಚೇರಿ ಮತ್ತು ಮುಖ್ಯ ಕಾರ್ಯದರ್ಶಿಯಿಂದ ಬಂದಿರುವ ಕಡತಗಳನ್ನು ಅವರು ಪರೀಶಿಲಿಸಿ ಸಹಿ ಮಾಡುತ್ತಿದ್ದಾರೆ. ಆದರೆ ವೈದ್ಯಕೀಯ ಸಿಬ್ಬಂದಿ ಹೊರತಾಗಿ ಬೇರೆ ಯಾರಿಗೂ ಒಳಗಡೆ ಹೋಗಲು ಅವಕಾಶ ನೀಡಲಾಗುತ್ತಿಲ್ಲ.

ಕಡತಗಳನ್ನು ಯುವಿ ಕಿರಣಗಳಿಂದ ಸ್ಯಾನಿಟೈಸ್ ಮಾಡಿದ ಬಳಿಕ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆಗಿದ್ದು, ಇದಕ್ಕೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು