ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ತಿಳಿಸಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ.