ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಮೂರು ದಿನ ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಮೂರು ದಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.