ಬೆಂಗಳೂರು ನಗರ

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಧಾರವಾಡ, ಬೀದರ್, ಕಲಬುರ್ಗಿ, ಹಾವೇರಿ, ಗದಗ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 18ರ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆ ಬಳಿಕ ಮುಂದಿನ ಮೂರು ದಿನ ಕೂಡ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಇಲಾಖೆಯು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ಇನ್ನೂ ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನೂ ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಾರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 21ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago