News Karnataka Kannada
Friday, May 03 2024
ಬೆಂಗಳೂರು ನಗರ

ಇಂದಿನಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Rain..
Photo Credit :

ಬೆಂಗಳೂರು :  ಇಂದಿನಿಂದ ಇನ್ನೂ ಮೂರು ದಿನ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಮುಂದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ.

ಇಂದು ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು