ಬೆಂಗಳೂರು ನಗರ

ಇಂದಿನಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : ಶುಕ್ರವಾರ (ಏ.22) ದಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಎಸ್‌ಎಸ್‌ಎಲ್’ಸಿ ಪರೀಕ್ಷೆಯಂತೆಯೇ ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದ್ದು, ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಿದೆ. ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮ ಸೂಚಕವಲ್ಲದ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ.

ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿವೆ. ಮುಖ್ಯ ಅಧೀಕ್ಷಕರನ್ನು ಬಿಟ್ಟು ಉಳಿದ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸಲಾಗಿದೆ.

ಪರೀಕ್ಷಾ ಅಕ್ರಮಗಳ ಮೇಲೆ ನಿಗಾವಹಿಸಲು 2900ಕ್ಕೂ ಹೆಚ್ಚು ಜಿಲ್ಲಾ, ತಾಲ್ಲೂಕು ಮತ್ತು ವಿಶೇಷ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಕೋವಿಡ್ ತೀವ್ರತೆಯಿಂದಾಗಿ ಪರೀಕ್ಷೆ ನಡೆಸದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಎರಡೂ ತರಗತಿ ಮಕ್ಕಳನ್ನು ಸಾಮೂಹಿಕವಾಗಿ ಪಾಸ್ ಮಾಡಲಾಗಿತ್ತು. ಈ ಸಾಲಿನಲ್ಲೂ ಆರಂಭದ ಕೆಲ ತಿಂಗಳು ಕೋವಿಡ್ ಬಾದಿಸಿದ್ದರಿಂದ ಸಮಯಕ್ಕೆ ಸರಿಯಾಗಿ ಕಾಲೇಜುಗಳು, ಭೌತಿಕ ತರಗತಿಗಳು ಆರಂಭವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಶ್ನೆ ಪತ್ರಿಗೆ ಸರಳವಾಗಿರುತ್ತದೆ. ವಿದ್ಯಾರ್ಥಿಗಳು ಭಯ, ಆತಂಕವಿಲ್ಲದೆ ನಿರಾತಂಕವಾಗಿ ಪರೀಕ್ಷೆ ಬರೆಯಬಹುದು ಎಂದು ಹೇಳಿದ್ದಾರೆ.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

2 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

17 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

39 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

41 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

58 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago