ಬೆಂಗಳೂರು : ಇಂದಿನಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…