ಬೆಂಗಳೂರು: ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ನಿವಾಸದ ಮೇಲೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ದಾಂಧಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿಯು ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದೆ.
ಈ ವಿಚಾರವನ್ನು ಪ್ರಬಲ ಅಸ್ತ್ರವಾಗಿರಿಸಿಕೊಂಡಿರುವ ಬಿಜೆಪಿ ನಾಯಕರು ಇಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸದನದ ಒಳಗೆ ಹಾಗೂ ಹೊರಗಡೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಈ ಘಟನೆ ಬಗ್ಗೆ ದೂರು ನೀಡಲಿರುವರು.