ಇಂದು, ನಾಳೆ ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಷ್ಕರ

ಬೆಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಗುರುವಾರ ಮತ್ತು ಶುಕ್ರವಾರ (ಡಿಸೆಂಬರ್ 16, 17) ದೇಶದಾದ್ಯಂತ ಮುಷ್ಕರ ನಡೆಸಲಿದೆ. ಇದರಿಂದಾಗಿ ಈ ಎರಡು ದಿನ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್‌ ಕ್ಲಿಯರೆನ್ಸ್‌ನಂತಹ ಸೇವೆಗಳಿಗೆ ಅಡ್ಡಿಯಾಗಲಿದೆ.

ಆರಂಭಿಕ ಹಂತದಲ್ಲಿ ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಮೂರು ಸಾವಿರಕ್ಕೂ ಅಧಿಕ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ರಾಷ್ಟ್ರೀಯ ಬ್ಯಾಂಕ್‌ ಉದ್ಯೋಗಿಗಳ ಒಕ್ಕೂಟದ (ಐಎನ್‌ಬಿಇಎಫ್‌) ರಾಜ್ಯದ ಘಟಕದ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಎಂ.ಕೆ. ‘ಪ್ರಜಾವಾಣಿ’ಗೆ ತಿಳಿಸಿದರು.

‘ಬ್ಯಾಂಕ್‌ಗಳ ಖಾಸಗೀಕರಣದಿಂದಾಗಿ ದೇಶದ ಜನರ ಉಳಿತಾಯದ ಹಣದ ಲೂಟಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಠೇವಣಿದಾರರ ಹಿತಾಸಕ್ತಿಗೆ ಧಕ್ಕೆಯಾಗಲಿದೆ. ಶಾಖೆಗಳು ಮುಚ್ಚುವ ಮತ್ತು ಜನಸಾಮಾನ್ಯರು ಬ್ಯಾಂಕಿಂಗ್‌ ಸೇವೆಗಳಿಂದ ವಂಚನೆಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಅವರು ಹೇಳಿದರು.

ಬ್ಯಾಂಕ್‌ಗಳು ರಾಷ್ಟ್ರೀಕರಣಗೊಂಡ ನಂತರ ಸರ್ಕಾರಿ ಸ್ವಾಮ್ಯದ ಯಾವುದೇ ಬ್ಯಾಂಕ್‌ ಮುಳುಗಿಲ್ಲ. ಮುಳುಗಿ ಹೋಗಿದ್ದ ಖಾಸಗಿ ಬ್ಯಾಂಕ್‌ಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡು ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರಿ ಬ್ಯಾಂಕ್‌ಗಳು ಕಾಪಾಡಿವೆ. ಇಂತಹ ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಹಣಕಾಸು ಕ್ಷೇತ್ರವನ್ನು ದೇಶಿ-ವಿದೇಶಿ ಬಂಡವಾಳಶಾಹಿಗಳಿಗೆ ಒಪ್ಪಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Gayathri SG

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

20 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

38 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

59 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago