ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.