ಇಂದು ರಾತ್ರಿಯಿಂದ ಆರಂಭಗೊಳ್ಳಬೇಕಿದ್ದ ‘ವೀಕೆಂಡ್ ಕರ್ಪ್ಯೂ’ ರದ್ದು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ  ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಸರ್ಕಾರ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದರು.ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನಾಕ್ರೋಶಕ್ಕೆ ಮಣಿದಿದೆ. ಕೊನೆಗೂ 2 ವಾರಗಳಿಗೆ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಾಗುತ್ತಿದೆ.  ಈ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವ ಆರ್ ಅಶೋಕ್, ಡಾ.ಕೆ.ಸುಧಾಕರ್, ಅರಗ ಜ್ಞಾನೇಂದ್ರ ಸೇರಿದಂತೆ ವಿವಿಧ ತಜ್ಞರು ಭಾಗವಹಿಸಿದ್ದಾರೆ.

ರಾಜ್ಯದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರೋ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಜೊತೆಗೆ 3ನೇ ಅಲೆಯ ತೀವ್ರತೆ ಅಷ್ಟೇನು ಹೆಚ್ಚಾಗಿಲ್ಲ. ಒಂದು ವೇಳೆ ಹೆಚ್ಚಾದ್ರೆ, 3ನೇ ಅಲೆಯ ತೀವ್ರತೆ ವ್ಯಾಪಕವಾದ್ರೇ ಮತ್ತೆ ಕಠಿಣ ನಿಯಮಗಳನ್ನು ಜಾರಿಗೆ ತರಬಹುದು.ಹೀಗಾಗಿ ವೀಕೆಂಡ್ ಕರ್ಪ್ಯೂ ರದ್ದು ಪಡಿಸುವಂತೆ ಸಚಿವರು ಸೇರಿದಂತೆ, ತಜ್ಞರು ಸಿಎಂ ಸಲಹೆ ಮಾಡಿದರು.

ಸಚಿವರು, ತಜ್ಞರ ಸಲಹೆಗೆ ಸಹಮತ ವ್ಯಕ್ತ ಪಡಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ರಾತ್ರಿಯಿಂದ ಜಾರಿಗೊಳ್ಳ ಬೇಕಿದ್ದಂತ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸೋ ನಿರ್ಧಾರವನ್ನು ಕೈಗೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಇಂದಿನ ಸಿಎಂ ಸಭೆಯ ಮಹತ್ವದ ನಿರ್ಧಾರವನ್ನು ಸಿಎಂ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ.

Swathi MG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

8 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

32 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago