ಇಂದು 2ನೇ ಬಾರಿಗೆ ಜಾರ್ಜ್ ಸಚಿವ ಸಂಪುಟಕ್ಕೆ ಸೇರ್ಪಡೆ

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ ಹಿನ್ನಲೆ ಅಧಿಕಾರ ಕಳೆದುಕೊಂಡಿದ್ದ ಜಾರ್ಜ್ ಅವರು ಇಂದು ಮತ್ತೆ ಅಧಿಕಾರಕ್ಕೆ ಮರಳಿದ್ದಾರೆ.

ರಾಜ್ಯಪಾಲ ವಜುಭಾಯಿ ಆರ್‌.ವಾಲಾ ಅವರು ಜಾರ್ಜ್‌ ಅವರಿಗೆ ರಾಜಭವನದ  ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಬೆಳಗ್ಗೆ 10.15 ಕ್ಕೆ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿ ಇದರ ಮೂಲಕ ಜಾರ್ಜ್ ಅವರು 2ನೇ ಸಲ ಸಿ.ಎಂ ಸಿದ್ಧರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಈ ಸಂದರ್ಭ ಸಿ.ಎಂ ಸಿದ್ಧರಾಮಯ್ಯ, ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ, ಸಚಿವ ಹೆಚ್ ಎಸ್ ಮಹದೇವ ಪ್ರಸಾದ್, ರಾಮಲಿಂಗಾ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೇ ಕೆ.ಜೆ ಜಾರ್ಜ್ ಅವರಿಗೆ ಮತ್ತೆ ನೀಡುವ ಸಾಧ್ಯತೆ ಇದ್ದು, ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಪ್ರಮಾಣ ವಚನ ಸ್ವೀಕಾರದ ನಂತರ ಶಿಫಾರಸು ಮಾಡಲಿದ್ದು, ನಂತರ ಜಾರ್ಜ್ ಅವರ ಖಾತೆ ನಿಗದಿಯಾಗಲಿದ್ದು, ಜಾರ್ಜ್ ಇಂದು 2ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡಿವೈಎಸ್ ಪಿ ಗಣಪತಿ ನೇಣಿಗೆ ಶರಣಾಗುವ ಮುನ್ನ ಗೃಹ ಸಚಿವ ಜಾರ್ಜ್ ಸೇರಿದಂತೆ ಇನ್ನಿಬ್ಬರು ಪೋಲೀಸ್ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವುದಾಗಿ ಹತ್ತಿರದ ನ್ಯೂಸ್ ಚಾನೆಲ್ ಗೆ ಸಂದರ್ಶನ ನೀಡಿದ್ದರು. ಈ ಹಿನ್ನೆಲೆ ನ್ಯಾಯಾಲಯ ಜಾರ್ಜ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಇದರಿಂದ ಜಾರ್ಜ್ ರಾಜಿನಾಮೆ ನೀಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಿ.ಎಂ ಸಿದ್ಧರಾಮಯ್ಯ ಅವರು ಎ.ಕೃಷ್ಣಪ್ಪ ಅವರನ್ನು ಖಾಲಿ ಇದ್ದ ಎರಡು ಸ್ಥಾನಗಳಲ್ಲಿ ಒಂದರಲ್ಲಿ ಈಗಾಗಲೇ ಸಂಪುಟಕ್ಕೆ ಸೇರ್ಪಡೆಮಾಡಿಕೊಂಡಿದ್ದು, ಇದೀಗ ಸಿಐಡಿ ಕ್ಲೀನ್ ಚಿಟ್ ನೀಡಿದ ಹಿನ್ನೆಲೆ ಇನ್ನೊಂದು ಸ್ಥಾನದಲ್ಲಿ  ಜಾರ್ಜ್ ಅವರು ಮತ್ತೆ ಸಂಪುಟಕ್ಕೆ ಸೇರಿಕೊಂಡಿದ್ದಾರೆ.

Desk

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

3 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

11 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

12 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

27 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

32 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

45 mins ago