ಇಂಧನ ಇಲಾಖೆಯ ನೇಮಕಕ್ಕೆ ಕನ್ನಡ ಪರೀಕ್ಷೆಯಲ್ಲಿ ತೇರ್ಗಡೆ ಕಡ್ಡಾಯ; ವಿ. ಸುನಿಲ್ ಕುಮಾರ್

ಬೆಂಗಳೂರು : ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ನೂ ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಹಿಂದೆ ನಡೆದ ನೇಮಕದಲ್ಲಿನ ವಿದ್ಯಮಾನದ ಮಾಹಿತಿ ಪಡೆದಿದ್ದ ಸಚಿವರು, ಮತ್ತೆ ಆ ರೀತಿ ಲೋಪ, ಅನ್ಯಾಯದ ಅಪಸ್ವರ ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಟಿಸಿಎಲ್ ನೇಮಕದಲ್ಲಿ ಮತ್ತೆ ಕನ್ನಡ ಭಾಷಾ ಪರೀಕ್ಷಾ ಕಡ್ಡಾಯಗೊಳಿಸುವ ಮೂಲಕ ಕನ್ನಡಪರ ಸಂಘಟನೆಗಳ ಧ್ವನಿಗೂ ಸರಕಾರ ಸ್ಪಂದಿಸಿದೆ. ದೀರ್ಘಾವದಿ ನಂತರ ತುಂಬುತ್ತಿರುವ ಹುದ್ದೆಗಳು ಕನ್ನಡಿಗರು, ಕನ್ನಡ ಬಲ್ಲ ಅರ್ಹರಿಗೆ ದಕ್ಕುವ ರೀತಿಯಲ್ಲಿ ಕ್ರಮ ಕೈಗೊಂಡಿದೆ.

ಈ ಹಿಂದೆ ಸಹಾಯಕ ಕಿರಿಯ ಇಂಜಿನಿಯರ್ ಇನ್ನಿತರ ತಾಂತ್ರಿಕ ಹುದ್ದೆಗಳ ನೇಮಕದಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿತ್ತು. ಇದರಿಂದ ಅನ್ಯರಾಜ್ಯಗಳ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಿತ್ತು. ವಿನಾಯಿತಿ ಲಾಭ ಪಡೆದ ಅನ್ಯರಾಜ್ಯಗಳ ಅದರಲ್ಲೂ ವಿಶೇಷವಾಗಿ ಆಂಧ್ರಪ್ರದೇಶದ ಅಭ್ಯರ್ಥಿಗಳು 60ಕ್ಕೂ ಹುದ್ದೆ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದರು ಇದರಿಂದ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯವಾಗಿತ್ತು.

Gayathri SG

Recent Posts

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

6 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

18 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

30 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

33 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

48 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

1 hour ago