News Karnataka Kannada
Friday, May 03 2024
ಬೆಂಗಳೂರು ನಗರ

ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ:ಹೆಚ್.ಡಿ.ಕುಮಾರಸ್ವಾಮಿ

Kumaraswamy
Photo Credit :

ಬೆಂಗಳೂರು: ಆಡಳಿತ ಪಕ್ಷ ಮತ್ತು ವಿಪಕ್ಷಗಳು ಮೇಕೆದಾಟು ವಿಚಾರವನ್ನು ಮುಂದಿಟ್ಟುಕೊಂಡು ಹಗ್ಗ ಜಗ್ಗಾಟ ನಡೆಸುತ್ತಿದ್ದು, ಇವರ ನಡುವೆ ಜನಸಾಮಾನ್ಯರು ಕೊರೊನಾ ಸಂಕಷ್ಟದಲ್ಲಿ ನಲುಗುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆ ರಾಜಕೀಯ ಪಕ್ಷಗಳ ಇಚ್ಛಾಸಕ್ತಿಯೋ ಅಥವಾ ಹುಚ್ಚಾಸಕ್ತಿಯೋ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇನ್ನು ಮೇಕೆದಾಟು ಯೋಜನೆ ಅನುಷ್ಠಾನ ಆಗಲೇ ಬೇಕು ಎಂಬುದು ಜನರ ಬಯಕೆಯಾದರೂ ಇವತ್ತು ಕಾಂಗ್ರೆಸ್ ನಡಿಗೆ ಮೇಕೆದಾಟು ಕಡೆಗೆ ಎನ್ನುವುದು ಕೊರೊನಾ ಕಡೆಗೆ ಎಂಬಂತೆ ಪರಿಣಮಿಸುತ್ತಿದೆ

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಲಾಕ್‍ ಡೌನ್ ಪಾದಯಾತ್ರೆ ಕುರಿತಂತೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಿರುವಾಗಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ  ಆಕ್ರೋಶವನ್ನು ಟ್ವಿಟರ್ ಮೂಲಕ ಹೊರ ಹಾಕಿದ್ದು ಅದು ಹೀಗಿದೆ.

ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವ ಅವರು, ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ.ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ. ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ.

ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ.ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ.ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ. ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು