ಇನ್ಮುಂದೆ ಪ್ರಾಥಮಿಕ ಶಾಲಾ ಹಂತದಿಂದಲೇ ಸ್ಪೋಕನ್ ಇಂಗ್ಲೀಷ್ ಕಲಿಕೆ: ಸಚಿವ ನಾಗೇಶ್

ಬೆಂಗಳೂರು : ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ‘ಸ್ಪೋಕನ್ ಇಂಗ್ಲಿಷ್​’ ಕಲಿಸಲಾಗುತ್ತೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, .ಹೋಬಳಿ/ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ.

ಬಳಿಕ ಶಾಲೆಯ ಎಲ್ಲ ತರಗತಿಗಳಿಗೆ ಅಗತ್ಯ ಕೊಠಡಿಗಳು ಮತ್ತು ಎಲ್ಲ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬರು ಶಿಕ್ಷಕರು ಲಭ್ಯವಿರುವಂತಹ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲಿಷ್​ ಕಲಿಕೆ ಹಾಗೂ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್​ ಕಲಿಸಿಕೊಡಲಾಗುತ್ತದೆ. ಅಲ್ಲದೆ ಈ ಸಲಹೆಯನ್ನು ಇ ಸಾಹಿತಿ ಎಸ್.ಎಲ್. ಭೈರಪ್ಪ ಅವರೂ ನೀಡಿದ್ದು, ಅದನ್ನು ಸ್ವೀಕರಿಸಲಾಗುತ್ತೆ ಎಂದು ತಿಳಿಸಿದರು.

ಪ್ರಸುತ್ತ ಖಾಸಗಿ ಶಾಲೆಗಳು ಮತ್ತು ಇಂಗ್ಲಿಷ್​ ಮಾಧ್ಯಮ ಶಿಕ್ಷಣದ ವ್ಯಾಮೋಹ ಜನರಲ್ಲಿ ಹೆಚ್ಚಿದೆ. ಯಾವುದೇ ಗುಣಮಟ್ಟ ಇರಲಿ ಮಕ್ಕಳಿಗೆ ಇಂಗ್ಲಿಷ್​ ಕಲಿಸಬೇಕು ಎನ್ನುವ ಆಸೆ ಪಾಲಕರಲ್ಲಿ ಇದೆ. ಹೀಗಾಗಿ, ಮಾದರಿ ಶಾಲೆಗಳಲ್ಲಿ ಇಂಗ್ಲಿಷ್​ ಸ್ಪೋಕನ್ ಇಂಗ್ಲಿಷ್​ ಆಗಿ ಕಲಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.

ಅದೇ ರೀತಿ ಪ್ರಾಥಮಿಕ ಶಾಲಾ ಹಂತದಿಂದಲೇ ಗಣಿತ ಮತ್ತು ಪರಿಸರ ಅಧ್ಯಯನ ವಿಷಯಗಳ ಪಠ್ಯ ಪುಸ್ತಕಗಳನ್ನು ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತಿದೆ. ಹಾಳೆಯ ಒಂದು ಬದಿ ಕನ್ನಡ ಇದ್ದರೆ, ಮತ್ತೊಂದು ಬದಿ ಇಂಗ್ಲಿಷ್​ನಲ್ಲಿ ಮುದ್ರಿಸಲಾಗುತ್ತಿದೆ. 1ರಿಂದ 4ನೇ ತರಗತಿವರೆಗೆ ಈ ಎರಡು ವಿಷಯಗಳನ್ನು ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತದೆ ಎಂದರು.
ಪ್ರತಿ ವರ್ಷ ಒಂದೊಂದು ತರಗತಿಯಂತೆ 1ರಿಂದ 3ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತಿತ್ತು. ಈ ಶೈಕ್ಷಣಿಕ ವರ್ಷದಿಂದ 1ರಿಂದ4ನೇ ತರಗತಿವರೆಗೆ ಮುದ್ರಿಸಲಾಗುತ್ತಿದೆ. ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಕನ್ನಡದ ಜೊತೆಗೆ ಇಂಗ್ಲಿಷ್​ ಭಾಷೆಯ ಪರಿಚಯ ಆಗಬೇಕು ಎನ್ನುವ ಉದ್ದೇಶವಿದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌.ಎಲ್. ಭೈರಪ್ಪ, ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್​ ಜೋಶಿ, ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Sneha Gowda

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

15 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

39 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago