ಬೆಂಗಳೂರು : ಸರ್ಕಾರದ ಇಲಾಖೆಯ ಇ-ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕ ಹಣ ಲೂಟಿ ಮಾಡಿದವರನ್ನು ಬಂಧಿಸಿ ಹಣ ವಸಾಲಾತಿಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು, ನಿಯಮ 330 ರ ಅಡಿಯಲ್ಲಿ ಎತ್ತಿದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ ಸಚಿವರು, ಸರ್ಕಾರದ ಇಲಾಖೆಯ ಇ-ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕ ಹಣ ಲೂಟಿ ಮಾಡಿದವರನ್ನು ಬಂಧಿಸಿ ಹಣ ವಸಾಲಾತಿಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಈಗಾಗಲೇ ಈ ಸಂಬಂಧ ಸುಮಾರು 17 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹ್ಯಾಕಿಂಗ್ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, 11.5 ಕೋಟಿಯಷ್ಟು ಹಣವನ್ನು ಹ್ಯಾಕಿಂಗ್ ಮಾಡಲಾಗಿದ್ದು, ಸುಮಾರು 36 ವಿವಿಧ ಬ್ಯಾಂಕ್ ಖಾತೆಗಳಿಗೆ, ವರ್ಗಾವಣೆ ಮಾಡಲಾಗಿದೆ, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದರು.