ಬೆಂಗಳೂರು: ರಾಜಧಾನಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ವಿನ್ಸೆಂಟ್ ಪಲ್ಲೋಟಿ, ಎಬಿನೈಜರ್ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ನೀಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರನ್ನು ಶಾಲೆಯಿಂದ ಹೊರ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಬಾಂಬ್ ಬೆದರಿಕೆಯ ಇ-ಮೇಲ್ ನಿಂದಾಗಿ ಶಾಲೆಗಳಿಗೆ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ಸೇರಿದಂತೆ ವಿವಿಧ ತಂಡವು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.