ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ರಕ್ಷಣೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಉಕ್ರೇನ್ ಮೇಲೆ ರಷ್ಯಾ ದಾಳಿ ಬೇರೆ ದೇಶಗಳಲ್ಲಿ ಆತಂಕ ಹೆಚ್ಚಿಸಿದೆ. ಬೇರೆ ಬೇರೆ ದೇಶಗಳಿಂದ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿ ನೆಲೆಸಿದ ಜನರ ಬಗ್ಗೆ ಕಳವಳ ಹೆಚ್ಚಾಗಿದೆ. ಭಾರತದಿಂದ ಅದರಲ್ಲೂ ಕರ್ನಾಟಕದಿಂದಲೂ ವಿದ್ಯಾರ್ಥಿಗಳು ನಾಗರೀಕರು ಉಕ್ರೇನ್‌ನಲ್ಲಿ ನೆಲೆಸಿದ್ದು ಅವರನ್ನು ಭಾರತಕ್ಕೆ ಕರೆತರಬೇಕು ಎಂದು ವಿಪಕ್ಷಗಳು ಕರ್ನಾಟಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ಲಿಫ್ಟ್‌ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯ ಮಾಡಿದ್ದಾರೆ.

ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಕನ್ನಡಿಗರು ಉಕ್ರೇನ್‌ನಲ್ಲಿ ಜೀವಭಯದಿಂದ ತತ್ತರಿಸಿದ್ದಾರೆ. ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು.

ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ-ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್ʼನಲ್ಲಿ ಬಾಂಬ್ʼಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ. ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರಕಾರವು ತನ್ನೆಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್ʼನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್ʼಲಿಫ್ಟ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, “ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್‌ ಕರೆತರಬೇಕು” ಎಂದಿದ್ದಾರೆ. ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್ʼನಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಬೇಕು.

ಶೆಲ್, ಕ್ಷಿಪಣಿ, ಬಾಂಬ್ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್‌ಗಳಲ್ಲಿ & ಮೆಟ್ರೋ ರೈಲು ಅಂಡರ್ʼಗ್ರೌಂಡ್ʼನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.

ಇನ್ನೂ ಭಾರತ ದೇಶದಾದ್ಯಂತ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ರಕ್ಷಣೆಗಾಗಿ ಒತ್ತಾಯಗಳು ಹೆಚ್ಚಾಗುತ್ತಿದೆ.

ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ರಷ್ಯಾ ಮತ್ತು ನ್ಯಾಟೋ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂಬ ನಮ್ಮ ನಂಬಿಕೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

 

Swathi MG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

4 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

4 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

4 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

4 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

5 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

5 hours ago