‘ಉಕ್ರೇನ್’ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಉಕ್ರೇನ್ ನಲ್ಲಿರುವಂತ ಕನ್ನಡಿಗರನ್ನು ರಕ್ಷಿಸೋದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಆರ್ ಟಿ ನಗರದ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉಕ್ರೇನ್ ನಲ್ಲಿ ಇರುವಂತ ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಾಸ್ ಕರೆತರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಿಸಲಾಗಿದೆ. ದೆಹಲಿಯಿಂದ ರಾಜ್ಯಕ್ಕೆ ಕರೆತರುವ ವ್ಯವಸ್ಥೆ ಮಾಡಲಿದ್ದಾರೆ ಎಂದರು.

ಉಕ್ರೇನ್ ನಲ್ಲಿ ಎಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿದ್ದಾರೋ, ಅಲ್ಲಿಂದಲೇ ಅವರನ್ನು ರಕ್ಷಣೆ ಮಾಡೋದಕ್ಕೆ ಕೇಂದ್ರ ವಿದೇಶಾಂಗ ಕಾರ್ಯದರ್ಶಿಯನ್ನು ಕೇಳಿಕೊಳ್ಳಲಾಗಿದೆ. ಅಲ್ಲದೇ ಊಟ, ಉಪಚಾರಕ್ಕೂ ವ್ಯವಸ್ಥೆ ಮಾಡುವಂತೆ ಸಹ ಹೇಳಿದ್ದೇವೆ ಎಂದರು.

ಉಕ್ರೇನ್ ನಲ್ಲಿ ಸಿಲುಕಿರುವಂತ ಕನ್ನಡಿಗರನ್ನು ಮರಳಿ ಕರೆತರುವಂತ ಕೆಲಸದಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

Swathi MG

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

4 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

15 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

23 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

39 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

46 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago