ಬೆಂಗಳೂರು ನಗರ

ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್

ಬೆಂಗಳೂರು; ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಣೆ ಮಾಡಲು ನಡೆಯುತ್ತಿರುವ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಚುರುಕುಗೊಂಡಿದೆ. ಭಾರತೀಯ ವಾಯುಪಡೆ ಸಹ ಬುಧವಾರದಿಂದ ಕಾರ್ಯಾಚರಣೆಗೆ ಕೈ ಜೋಡಿಸಿದೆ.

ಕರ್ನಾಟಕ ಮೂಲದ 694 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಮಂಗಳವಾರದ ತನಕ 8 ಬ್ಯಾಚ್‌ಗಳಲ್ಲಿ 55 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಈ ಕುರಿತು ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ಇನ್ನೂ ರಾಜ್ಯದ 455 ಜನರು ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಪಯತ್ನ ನಡೆಸಲಾಗುತ್ತಿದೆ.

ಆಪರೇಷನ್ ಗಂಗಾ ಮೊದಲ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದ 12 ಜನರು ಬೆಂಗಳೂರಿಗೆ ಮೊದಲ ಬ್ಯಾಚ್‌ನಲ್ಲಿ ಆಗಮಿಸಿದರು. ಫೆಬ್ರವರಿ 28ರಂದು 7 ಜನರು ದೆಹಲಿಗೆ, ಮಾರ್ಚ್ 1ರಂದು ದೆಹಲಿಗೆ 8, ಮುಂಬೈಗೆ 8 ಕರ್ನಾಟಕದ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಣೆ, ಕುಟುಂಬಕ್ಕೆ ನೈತಿಕ ಧೈರ್ಯ ತುಂಬಲು ಕೆಎಸ್‌ಡಿಎಂಎ ತಂಡವೊಂದನ್ನು ರಚನೆ ಮಾಡಿದೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಉಕ್ರೇನ್‌ನಲ್ಲಿ ಸಿಲುಕಿರುವ ಜನರ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

1 hour ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

4 hours ago