News Karnataka Kannada
Sunday, April 28 2024
ಬೆಂಗಳೂರು ನಗರ

ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ: ಶುಭಾಶಯ ಕೋರಿದ ಮೋದಿ

Modi Devegowda
Photo Credit :

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮೇ 18 ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರೀಗ 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಪುತ್ರ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಸ್ಸು ಮತ್ತು ಆರೋಗ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು. ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ.

ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಎಚ್.‌ಡಿ ದೇವೇಗೌಡ ಅವರ ಪೂರ್ಣ ಹೆಸರು ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ. ದೇವೇಗೌಡರು ಮೇ 18ರ 1933ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, ಭಾರತದ 12ನೇ ಪ್ರಧಾನ ಮಂತ್ರಿಯಾಗಿದ್ದವರು. ದೇವೇಗೌಡರು ಮೇ 30ರ 1997ರಂದು ದೇಶದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು