ಬೆಂಗಳೂರು: ಎಟಿಎಂಗೆ ಹಣ ಹಾಕುತ್ತಿದ್ದ ವಾಹನವೊಂದರ ಚಾಲಕ 64 ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು, ಈ ಘಟನೆಯು ನಗರದ ನವರಂಗ್ ನಿಂದ ಬುಧವಾರ ಸಂಜೆ ವೇಳೆ ನಡೆದಿದೆ.
ಎಟಿಎಂಗೆ ಹಣ ಹಾಕುತ್ತಿದ್ದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಡ್ಯದ ನಿವಾಸಿ ಯೋಗೇಶ್ ಎಂಬಾತ ಹಣದೊಂದಿಗೆ ಆಟೋದಲ್ಲಿ ಪರಾರಿಯಾಗಿದ್ದಾನೆ. ಆತ ಕಳೆದ ನಾಲ್ಕು ವರ್ಷಗಳಿಂದ ಈ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸುಬ್ರಹ್ಮಣ್ಯ ನಗರ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿರುವರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿರುವರು.