ಎಲ್ಲಾ ಪದಾಧಿಕಾರಿಗಳು ಮತ್ತು ರೈತರ ಬೆಂಬಲ ನನಗಿದೆ: ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ‘ಶಿವಮೊಗ್ಗದಲ್ಲಿ ಸಭೆ ನಡೆಸಿದವರಿಗೂ ನಮ್ಮ ರೈತ ಸಂಘಕ್ಕೂ ಸಂಬಂಧವೇ ಇಲ್ಲ. ನನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಅಧಿಕಾರ ಅವರಿಗೆ ಇಲ್ಲ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಿವಮೊಗ್ಗದಲ್ಲಿ ಸಭೆ ನಡೆದಿರುವುದು ಸಾಮೂಹಿಕ ನಾಯಕತ್ವದ ರೈತ ಸಂಘದ್ದು. ನಮ್ಮ ಸಂಘಟನೆಯ ನಾಯಕರು ಅವರಲ್ಲ. ನನ್ನನ್ನು ಉಚ್ಛಾಟನೆ ಮಾಡಲು ಅವರು ಯಾರು’ ಎಂದು ಪ್ರಶ್ನಿಸಿದರು.

‘ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರು ಕಟ್ಟಿದ ರೈತ ಸಂಘದ ಅಧ್ಯಕ್ಷನಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಎಲ್ಲ ಎಲ್ಲಾ ಪದಾಧಿಕಾರಿಗಳು ಮತ್ತು ರೈತರ ಬೆಂಬಲ ನನಗಿದೆ. ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಅಧಿಕಾರ ಇರುವುದು ರೈತರಿಗೆ ಮಾತ್ರ. ನಾನೇ ರೈತ ಸಂಘದ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ. ಚೋಣಪ್ಪ ಪೂಜಾರಿ ಅಧ್ಯಕ್ಷರಾಗಿದ್ದ ಸಾಮೂಹಿಕ ನಾಯಕತ್ವದ ರೈತ ಸಂಘಕ್ಕೆ ಎಚ್‌.ಆರ್‌. ಬಸವರಾಜ‍ಪ್ಪ ಅಧ್ಯಕ್ಷರಾಗಬಹುದು’ ಎಂದರು.

‘ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಅಧಿಕಾರ ದುರ್ಬಳಕೆ ಸಾಬೀತುಪಡಿಸಿದರೆ ಚಳವಳಿಗಳಲ್ಲಿ ಭಾಗವಹಿಸುವುದಿಲ್ಲ. ಹಸಿರು ಟವೆಲ್ ಧರಿಸುವುದಿಲ್ಲ. ಕರ್ನಾಟಕ ರಾಜ್ಯ ರೈತ ಸಂಘ ಸಂಸ್ಥಾಪಕರಲ್ಲಿ ನಾನು ಒಬ್ಬನಾಗಿದ್ದೇನೆ. ಆರೋಪ ಮಾಡಿದ ತಕ್ಷಣ ಅಪರಾಧಿಯಾಗುವುದಿಲ್ಲ. ಆರೋಪದ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಹೇಳಿದರು.

Gayathri SG

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

8 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

15 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

28 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

31 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

42 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

49 mins ago