News Karnataka Kannada
Friday, May 10 2024
ಬೆಂಗಳೂರು ನಗರ

ಏ.1ಕ್ಕೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
Photo Credit :

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಖಚಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಮುಖಂಡರಲ್ಲಿ ತಳಮಳ ಸೃಷ್ಟಿಯಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವುದು ಹಾಗೂ ರಾಜ್ಯ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಚುನಾವಣೆ ಮುಗಿದ ಬಳಿಕ ಚರ್ಚೆ ಮಾಡೋಣ ಎಂಬ ಮಾತನ್ನು ಷಾ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಪಂಚ ರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್‌ ಅಧಿವೇಶನ ಆರಂಭವಾಗಿತ್ತು. ಅದು ಮುಗಿಯುವವರೆಗೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಬೇಡ ಎಂಬ ನಿಲುವಿಗೆ ಪಕ್ಷದ ನಾಯಕರು ಬಂದಿದ್ದರು. ಇದೀಗ ಅಮಿತ್‌ ಶಾ ಅವರು ಏಪ್ರಿಲ್ 1 ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಜೆಟ್‌ ಅಧಿವೇಶನವೂ ಮುಗಿದಿರುತ್ತದೆ. ಹೀಗಾಗಿ, ಅವರು ರಾಜ್ಯಕ್ಕೆ ಆಗಮಿಸಿದಾಗ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆಯೂ ನಡೆಯಬಹುದಾಗಿದೆ.

ಕೇಂದ್ರ ಗೃಹ ಸಚಿವರು ಏಪ್ರಿಲ್ 1 ರಂದು ಖಚಿತಗೊಂಡ ಬಳಿಕ, ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯ ಸಂಘಟನಾ ಪ್ರಧಾ‌ನ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಜೊತೆ ಚರ್ಚೆ ನಡೆಸಿದರು.

ಏಪ್ರಿಲ್ ಒಂದರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿಯ ಸಿದ್ಧತೆ, ನಿಗಮ-ಮಂಡಳಿ ನೇಮಕಾತಿ ವಿಚಾರಗಳ ಕುರಿತು ಹಿರಿಯ ನಾಯಕರ ಜೊತೆ ಮಾತುಕತೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು