ಬೆಂಗಳೂರು ನಗರ

ಒಕ್ಕಲಿಗರ ಸಂಘದ ಮತ ಮರು ಎಣಿಕೆಗೆ ಮನವಿ

ಬೆಂಗಳೂರು: ಒಕ್ಕಲಿಗರ ಸಂಘದ ಚುನಾವಣೆಯ ಮತ  ಎಣಿಕೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಮರುಮತ ಎಣಿಕೆ ಮಾಡಬೇಕು ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಸತೀಶ್ ಕಡತನಮಲೆ, ಅರಮನೆ ಶಂಕರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಿಚಾರಣೆಗೆ ಅಂಗೀಕಾರ ಮಾಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ರಜಾಕಾಲದ ಏಕ ಸದಸ್ಯ  ನ್ಯಾಯಪೀಠವು, ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಹಾಗೂ ಸಂಘದ ಆಡಳಿತಾಧಿಕಾರಿ ಅವರಿಗೆ ನೊಟೀಸ್ ಜಾರಿ ಮಾಡಿದೆ.

ಈ ಬಗ್ಗೆ ರಜಾ ಕಾಲ ಮುಗಿದ ನಂತರ ಪುನಾ ನ್ಯಾಯಾಲಯದಿಂದ ಆದೇಶ ಪಡೆದುಕೊಳ್ಳುವಂತೆ ಅರ್ಜಿದಾರರಿಗೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು.

ಸಂಘದ ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿದೆ. 389 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆದರೂ ಒಬ್ಬ ಅಭ್ಯರ್ಥಿಗೆ ಕೇವಲ 25 ಪ್ರವೇಶ  ಪಾಸ್ ನೀಡಲಾಗಿತ್ತು.  25 ಪಾಸ್ ಗಳನ್ನು ಇಟ್ಟುಕೊಂಡು 389 ಕೇಂದ್ರಗಳಲ್ಲಿ ಮತ ಎಣಿಕೆ ವೀಕ್ಷಿಸಲು ಸಾಧ್ಯವೇ?  ಈ ವಿಷಯವನ್ನು ಆ ಸಂದರ್ಭದಲ್ಲೇ ಚುನಾವಣಾ ಅಧಿಕಾರಿಗೆ ಲಿಖಿತ ದೂರು ನೀಡಿದ್ದರೂ ಅವರು ಪರಿಗಣನೆ ಮಾಡಲಿಲ್ಲ. ಈ ಕಾರಣಕ್ಕೆ ನಾವು ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ಸತೀಶ್ ಕಡತನಮಲೆ ತಿಳಿಸಿದ್ದಾರೆ.

Sneha Gowda

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

11 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

21 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

34 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago