ಒಮಿಕ್ರಾನ್ ಆತಂಕದ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.ರಾಜ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಏರ್ಪೋರ್ಟ್ ನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯ ಬಳಿಕ ಮಾರ್ಗಸೂಚಿ ಪ್ರಕಟಿಸಲಾಗುವುದು.

ತಜ್ಞರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತಜ್ಞರೊಂದಿಗೆ ಸಭೆ ನಡೆಸಲಿರುವ ಸಿಎಂ ವಿದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಕಂದಾಯ, ಆರೋಗ್ಯ ಇಲಾಖೆ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ವಿಪತ್ತು ನಿರ್ವಹಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಏರ್ ಪೋರ್ಟ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಕೋವಿಡ್ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರು ಸಭೆಗೆ ಭಾಗವಹಿಸಲು ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ.ಸಭೆಯ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

Swathi MG

Recent Posts

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

7 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

19 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

29 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

49 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago