ಬೆಂಗಳೂರು ನಗರ

ಒಮಿಕ್ರಾನ್ ನಿಂದ ರಕ್ಷಣೆ ಪಡೆಯಲು ಎಚ್ಚರಿಕೆ ಕ್ರಮ ಅಗತ್ಯ

ಕೊರೊನಾ ವೈರಸ್‌ ಮಹಾಮಾರಿ ವಿಶ್ವದ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತ್ರ ಈಗ ಒಮಿಕ್ರಾನ್ ಭಯ ಶುರುವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ.

ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗ್ಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು.

ಒಮಿಕ್ರಾನ್ ದಿಂದ ರಕ್ಷಣೆ ಪಡೆಯುವುದು ಹೇಗೆ? :

ಲಸಿಕೆ : ಭಾರತದಲ್ಲಿ ಲಸಿಕೆ ಅಭಿಯಾನ ಮುಂದುವರೆದಿದೆ, ಭಾರತದ ಅನೇಕರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಆದ್ರೆ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕ್ತಿದ್ದಾರೆ. ಲಸಿಕೆ ಪಡೆಯದಿರುವವರು ಅಪಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಹಾಗಾಗಿ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವ ಅಗತ್ಯವಿದೆ. ಲಸಿಕೆ ಪಡೆಯದ ಜನರಿಗೆ, ಲಸಿಕೆ ಪಡೆಯುವಂತೆ ಸಲಹೆ ನೀಡುವ ಅಗತ್ಯವೂ ಇದೆ.

ಮಾಸ್ಕ್ ಅಗತ್ಯ : ಕೊರೊನಾದಿಂದ ರಕ್ಷಣೆ ಬೇಕೆಂದರೆ ಮಾಸ್ಕ್ ಕಡ್ಡಾಯ. ಮೊದಲ ಅಲೆಯಿಂದಲೂ ಮಾಸ್ಕ್ ಮಹತ್ವದ ಬಗ್ಗೆ ವೈದ್ಯರು, ತಜ್ಞರು ಸಲಹೆ ನೀಡುತ್ತಲೇ ಬಂದಿದ್ದಾರೆ. ಕೊರೊನಾ ಎರಡನೇ ಅಲೆ ಮುಗಿದ ನಂತ್ರ ಮಾಸ್ಕ್ ಧರಿಸುವವರ ಸಂಖ್ಯೆ ನಿಧಾನವಾಗಿ ಕಡಿಮೆಯಾಗಿದೆ. ಅನೇಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಇದು ತಪ್ಪು. ಮಕ್ಕಳಿಂದ ಹಿಡಿದು ಎಲ್ಲರೂ ಮನೆಯಿಂದ ಹೊರ ಬೀಳುವಾಗ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.

ಸಾಮಾಜಿಕ ಅಂತರ : ಕೊರೊನಾದ ಈ ಹೊಸ ರೂಪಾಂತರವನ್ನು ತಪ್ಪಿಸಬೇಕಾದರೆ, ಪ್ರತಿಯೊಬ್ಬರೂ ಮೊದಲಿನಂತೆ ಪರಸ್ಪರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗುತ್ತದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಂದ ದೂರವಿರಬೇಕು.

ಕೈ ನೈರ್ಮಲ್ಯ : ಕೈಗಳನ್ನು ಸಾಬೂನು ಮತ್ತು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸುತ್ತಿರಬೇಕು. 20 ನಿಮಿಷಗಳ ಕಾಲ ನೀರು ಮತ್ತು ಸಾಬೂನಿನಿಂದ ಕೈಗಳನ್ನು ತೊಳೆಯಬೇಕು. ಹೊರಗೆ ಹೋಗಿ ಮನೆಗೆ ಬಂದ ನಂತ್ರ ಸ್ಯಾನಿಟೈಜರ್ ನಿಂದ ಕೈಗಳನ್ನು ಸ್ವಚ್ಛಗೊಳಿಸಬೇಕು. ಹಾಗೆ ಸ್ನಾನ ಮಾಡುವುದು ಬಹಳ ಮುಖ್ಯ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

20 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

41 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

54 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago