ಬೆಂಗಳೂರು : ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದವರಿಗೆ ಒಮಿಕ್ರಾನ್ ಸೋಂಕು ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐವರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿತ್ತು
ಬಿಬಿಎಂಪಿ ಉನ್ನತ ಅಧಿಕಾರಿಗಳಿಂದ ಈ ಕುರಿತು ಮಾಹಿತಿ ಲಭ್ಯವಾಗಿದ್ದು, ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೆ ಒಮಿಕ್ರಾನ್ ವೈರಸ್ ಇಲ್ಲ, ಇಂದು ಮಧ್ಯಾಹ್ನದ ವೇಳೆಗೆ ಅಧಿಕೃತ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ.
ಐವರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್ ನಲ್ಲಿ ಒಮಿಕ್ರಾನ್ ಇಲ್ಲ ಎಂದು ರಿಪೋರ್ಟ್ ಬಂದಿದೆ ಎನ್ನಲಾಗಿದೆ. ಟೆಸ್ಟ್ ರಿಪೋರ್ಟ್ ಲಭ್ಯವಾದ ಬಳಿಕ ಮತ್ತೊಮ್ಮೆ ಐವರಿಗೂ ಅರ್ ಟಿಪಿಸಿಆರ್ ಟೆಸ್ ಮಾಡಲಾಗುವುದ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ.