ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ; ಸಚಿವ ಆರ್‌ ಅಶೋಕ್‌

ಬೆಂಗಳೂರು : ಸುಮಾರು 15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡಿ ಜನತೆಗೆ ಅನುಕೂಲ ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಪ್ರಾರಂಭಿಸಲಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಕಡತಗಳು ಕೇವಲ ಕಾಗದ ಅಲ್ಲ. ಅದರಲ್ಲಿ ಜನರ ಹಿತ, ಭಾವನೆ ಅಡಕವಾಗಿದೆ ಎನ್ನುವುದು ನನ್ನ ಅಭಿಪ್ರಾಯ. ನಾನಾ ಕಾರಣಗಳಿಂದ ಇತ್ಯರ್ಥ ಆಗದೆ ಇದ್ದ ಹಳೆಯ ಕಡತಗಳನ್ನು 10 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ತೀರ್ಮಾನ ಮಾಡಬೇಕು. ಜನರ ಅಲೆದಾಟ ತಪ್ಪಿಸಬೇಕು. ಪ್ರಾಯೋಗಿಕವಾಗಿ ಗುರುವಾರ ಮೈಸೂರಿನಲ್ಲಿ ಪ್ರಾರಂಭಿಸುತ್ತಿದ್ದೇನೆ. ನಂತರ ರಾಜ್ಯಾದ್ಯಂತ ಈ ಅಭಿಯಾನವನ್ನು ಕಂದಾಯ ಇಲಾಖೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿಯೂ ಕಡತಗಳ ಸಮಸ್ಯೆ ಅರಿವಾಗಿತ್ತು. ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ಈ ಅಭಿಯಾನ ನಡೆಯಲಿದೆ. ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಇದರ ನೇತೃತ್ವ ವಹಿಸಲಿದ್ದಾರೆ. ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ಈ ಅಭಿಯಾನದಲ್ಲಿ ಕೆಲಸ ಮಾಡುತ್ತಾರೆ. ಕಂದಾಯ ಇಲಾಖೆಗೆ ಹೊಸ ದಿಕ್ಕನ್ನು ನೀಡಬೇಕು. ಕಂದಾಯ ಇಲಾಖೆ ಜನಸ್ನೇಹಿ ಇಲಾಖೆ ಆಗಿರಬೇಕು ಎನ್ನುವುದು ನನ್ನ ಆಶಯ ಎಂದು ಅಶೋಕ್‌ ಹೇಳಿದರು.

Gayathri SG

Recent Posts

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

10 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

28 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

47 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago