News Karnataka Kannada
Wednesday, May 01 2024
ಬೆಂಗಳೂರು ನಗರ

ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು : ಬಸವರಾಜ ಬೊಮ್ಮಾಯಿ

Photo
Photo Credit :

ಬೆಂಗಳೂರು: ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಶಾಸಕರ ಭವನದ ಆವರಣದ ಬಳಿ ಇರುವ ಸಂತ ಕವಿ ಶ್ರೀಕನಕದಾಸರ ಪುತ್ಥಳಿಯ ಬಳಿ ಕನಕದಾಸ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದು ತಿಳಿಸಿದರು.

ಶಿಗ್ಗಾವಿಯಲ್ಲಿ ಹುಟ್ಟಿ ಕರ್ಮಭೂಮಿ ಕಾಗಿನೆಲೆ. ದಾಸ ಪದ ಹಾಡಿ ಜೀವನದ ಸಾರವನ್ನು ತಿಳಿಸಿದರು. ‘ಕುಲ ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂದು ಮಾರ್ಮಿಕವಾಗಿ ತಿಳಿಸಿದ ಕನಕದಾಸರು ರಚಿಸಿರುವ ರಾಮಧಾನ್ಯಚರಿತಾ ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಅವರ ತತ್ತ್ವ ಆದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ ಸಮಾನತೆ, ಪ್ರಗತಿ ಸಾಧಿಸಲು ಸಾಧ್ಯವಿದೆ. ಪರಿವರ್ತನೆಯ ಹರಿಕಾರರು, ತಮ್ಮ ರಾಜಸತ್ವವನ್ನು ಬಿಟ್ಟು, ಅವರು ದಾಸಶ್ರೇಷ್ಠರಾಗಿದ್ದಾರೆ ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂತರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಲು ಕಾಗಿನೆಲೆಯಲ್ಲಿ ಅರಮನೆ, ಸ್ಮಾರಕ ನಿರ್ಮಿಸಲಾಗಿದೆ. ಇದೇ ವೈಚಾರಿಕತೆಗೆ ಸೇರಿದ ಸಂಗೊಳ್ಳಿ ರಾಯಣ್ಣನ ಸಮಾಧಿ ಹಾಗೂ ಮ್ಯೂಸಿಯಂ ನಿರ್ಮಿಸಲಾಗುತ್ತಿದೆ. ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಒಟ್ಟು ₹ 230 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ನಮ್ಮ ಯುವಕರ ಆದರ್ಶಪ್ರಾಯ ಬದುಕಿಗೆ ಶಿಸ್ತಿನ ಸೈನಿಕ ಶಾಲೆಯನ್ನು ನಿರ್ಮಿಸಲು ಕೇಂದ್ರದ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗಿದೆ. ಈ ಶಾಲೆಯನ್ನು ರಕ್ಷಣಾ ಇಲಾಖೆಗೆ ಹಸ್ತಾಂತರಿಸುವ ಇಚ್ಛೆಯನ್ನು ಸರಕಾರ ಹೊಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು