News Karnataka Kannada
Thursday, May 02 2024
ಬೆಂಗಳೂರು ನಗರ

ಕನ್ನಡ ಕಲಿಕೆ ಕಡ್ಡಾಯ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

Karnataka High Court
Photo Credit :

ಬೆಂಗಳೂರು : ರಾಜ್ಯದ ಕಾಲೇಜುಗಳಲ್ಲಿ  ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಸೂಚನೆ ನೀಡಿದ್ದು, ಮುಂದಿನ ಆದೇಶದವರೆಗೂ ಬಲವಂತದ ಕನ್ನಡ ಕಡ್ಡಾಯ ಬೇಡ ಎಂದು ಸೂಚನೆ ನೀಡಿದೆ.

ರಾಜ್ಯ ಸರ್ಕಾರವು ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಎಂದು ಹೇಳಿದೆ.

ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು