News Karnataka Kannada
Friday, May 03 2024
ಬೆಂಗಳೂರು ನಗರ

ಕಫ್ರ್ಯೂ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣ ದಾಖಲು; ಕಮಲ್ ಪಂಥ್

Kamal Pant
Photo Credit :

ಬೆಂಗಳೂರು,ಡಿ.27 : ಸರ್ಕಾರದ ಆದೇಶದಂತೆ ನಾಳೆಯಿಂದ ನೈಟ್ ಕಫ್ರ್ಯೂ ಜಾರಿಗೆ ಪೊಲೀಸ್ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಕಫ್ರ್ಯೂ ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಗುಂಪು ಸೇರಬಾರದು, ಪಬ್, ಬಾರ್, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು ರಾತ್ರಿ 10 ಗಂಟೆಗೆ ಮುಚ್ಚಬೇಕು, ತುರ್ತು ಕೆಲಸಕ್ಕೆ ಹೋಗುವವರು, ಅಸ್ಪತ್ರೆಗೆ ಹೋಗುವವರು ದಾಖಲೆ ತೋರಿಸಬೇಕು ಎಂದು ಹೇಳಿದರು.

ಇವರನ್ನು ಹೊರತುಪಡಿಸಿ ಬೇರೆ ಯಾರೂ ಅನಗತ್ಯವಾಗಿ ಹೊರಗೆ ಓಡಾಡಬಾರದು. ಸರ್ಕಾರದ ಆದೇಶವನ್ನು ನಾವು ಪಾಲಿಸಬೇಕು, ಕೋವಿಡ್ ನಿಯಮಗಳ ಅನ್ವಯ ಜನರು ಎಲ್ಲಿಯೂ ಒಟ್ಟಾಗಿ ಸೇರಬಾರದು ಎಂದು ಹೇಳಿದರು.

ರೈಲ್ವೆ, ಬಸ್, ವಿಮಾನ ಪ್ರಯಾಣ ಮಾಡುವವರು, ಟಿಕೆಟ್ ತೋರಿಸಬೇಕು, ರಾತ್ರಿ ಪಾಳಿ ಕೆಲಸಕ್ಕೆ ಹೋಗುವವರು ಸೂಕ್ತ ದಾಖಲೆ ತೋರಿಸಬೇಕಾಗುತ್ತದೆ ಎಂದು ಕಮಲ್ ಪಂತ್ ತಿಳಿಸಿದರು. ಓಡಾಡಲು ಈ ಬಾರಿ ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ವಿತರಿಸುವುದಿಲ್ಲ. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಸುಖಾಸುಮ್ಮನೆ ಓಡಾಡಲು ಬಿಡಲ್ಲ, ಮುಖ್ಯ ರಸ್ತೆಗಳಲ್ಲಿ ನಾಕಾಬಂದಿ ಮಾಡಲಾಗುತ್ತದೆ, ತುರ್ತು ಸೇವೆ, ಅಗತ್ಯ ಕೆಲಸಕ್ಕೆ ಹೋಗುವವರಿಗೆ ನಿರ್ಬಂಧವಿಲ್ಲ ಎಂದರು.

ಆರೋಗ್ಯದ ದೃಷ್ಟಿಯಿಂದ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದೆ. ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು, ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರ ದಾಖಲು ಮಾಡಿಕೊಳ್ಳುತ್ತೇವೆ ಎಂದು ಕಮಲ್ ಪಂಥ್ ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು