News Karnataka Kannada
Saturday, May 04 2024
ಬೆಂಗಳೂರು ನಗರ

ಕರಾಮುವಿ ಪದವಿ ಕೋರ್ಸ್‌ಗಳ ಪ್ರವೇಶಾತಿ ಮತ್ತೆ ವಿಸ್ತರಣೆ, ಡಿ.24 ಕೊನೆ ದಿನ.

Admission College
Photo Credit :
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (Karnataka State Open University) 2021ರ ಜುಲೈ ಅವಧಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಹಾಗೂ ಡಿಪ್ಲೋಮಾ ಮತ್ತು ಪಿಜಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
ಇದಕ್ಕಿಂತ ಮೊದಲು ದಂಡ ಶುಲ್ಕವಿಲ್ಲದೇ ಡಿಸೆಂಬರ್ 15, 2021ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಕರಾಮುವಿ (KSOU) ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 24, 2021ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ http://ksouportal.com/Views/index.aspx ಗೆ ಭೇಟಿ ನೀಡಿ.
ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 100ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು www.ksoumysuru.ac.in ವೆಬ್‌ಸೈಟ್ ಗೆ ಭೇಟಿ ನೀಡಬಹುದು ಎಂದು ಮಲ್ಲೇಶ್ವರಂ ಮಹಿಳಾ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಲೋಕೇಶ. ಆರ್ ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು