ಬೆಂಗಳೂರು ನಗರ

ಕರಾಮುವಿ ಪದವಿ ಕೋರ್ಸ್‌ಗಳ ಪ್ರವೇಶಾತಿ ಮತ್ತೆ ವಿಸ್ತರಣೆ, ಡಿ.24 ಕೊನೆ ದಿನ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (Karnataka State Open University) 2021ರ ಜುಲೈ ಅವಧಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಹಾಗೂ ಡಿಪ್ಲೋಮಾ ಮತ್ತು ಪಿಜಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
ಇದಕ್ಕಿಂತ ಮೊದಲು ದಂಡ ಶುಲ್ಕವಿಲ್ಲದೇ ಡಿಸೆಂಬರ್ 15, 2021ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಕರಾಮುವಿ (KSOU) ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 24, 2021ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ http://ksouportal.com/Views/index.aspx ಗೆ ಭೇಟಿ ನೀಡಿ.
ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 100ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು www.ksoumysuru.ac.in ವೆಬ್‌ಸೈಟ್ ಗೆ ಭೇಟಿ ನೀಡಬಹುದು ಎಂದು ಮಲ್ಲೇಶ್ವರಂ ಮಹಿಳಾ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಲೋಕೇಶ. ಆರ್ ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

5 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

14 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

26 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

45 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

50 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

59 mins ago