News Karnataka Kannada
Thursday, May 02 2024
ಬೆಂಗಳೂರು ನಗರ

ಕರ್ನಾಟಕದಲ್ಲಿ ಮೂರನೇ ಒಮಿಕ್ರಾನ್ ಪ್ರಕರಣ ಪತ್ತೆ

Omicron
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೂರನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದಿದ್ದ 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಪ್ರಾಥಮಿಕ ಮತ್ತು 15 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು