News Karnataka Kannada
Sunday, May 05 2024
ಬೆಂಗಳೂರು ನಗರ

ಕರ್ನಾಟಕದ ಮೇಲೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ

ಸಿಎಂ ಬಸವರಾಜ ಬೊಮ್ಮಾಯಿ
Photo Credit : News Kannada

ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರಕಾರ ಈಗಾಗಲೇ ಬಜೆಟ್‌ನಲ್ಲಿ ನೀಡಿರುವ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸಿ ಜನರ ವಿಶ್ವಾಸವನ್ನು ಗಳಿಸುತ್ತೇವೆ. 2023ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ ಬಿಜೆಪಿಯನ್ನು ಪುನರಾಯ್ಕೆ ಮಾಡಿ ಐದು ವರ್ಷ ಅಧಿಕಾರದಲ್ಲಿರಲಿದೆ ಎಂಬ ವಿಶ್ವಾಸವಿದೆ ಎಂದರು. ಜನತೆಗೆ, ಪಕ್ಷಕ್ಕೆ, ಶಾಸಕರಿಗೆ ಇಂದಿನ ಚುನಾವಣಾ ಫಲಿತಾಂಶ ಸಕಾರಾತ್ಮಕ ಉತ್ತೇಜನ ನೀಡಿದೆ ಎಂದರು.

ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಮತ್ತೊಮ್ಮೆ ಮೋದಿಯವರ ನೇತೃತ್ವದಲ್ಲಿ ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರಕಾರ ಉತ್ತರ ಪ್ರದೇಶವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ. ಐದು ರಾಜ್ಯಗಳ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಮ್ಮ ನಾಯಕರಾದ ನರೇಂದ್ರ ಮೋದಿಯವರು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಹಾಗೂ ಸಂಬಂಧಿಸಿದ ಮುಖ್ಯ ಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ವಿರೋಧ ಪಕ್ಷ ಧೂಳಿಪಟ:
ನರೇಂದ್ರ ಮೋದಿಯವರ ನಾಯಕತ್ವದಲ್ಲಿರುವ ಕಾರ್ಯಕ್ರಮಗಳು, ಬಡವರ, ರೈತರ, ಹೆಣ್ಣುಮಕ್ಕಳ ಪರವಾಗಿದೆ. ಕೋವಿಡ್ ನಿರ್ವಹಣೆ, ಆರ್ಥಿಕ ಸಬಲೀಕರಣ ಮುಂತಾದ ಕೆಲಸಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮಾಡುವ ಪಣವನ್ನು ನಮ್ಮ ನಾಯಕರು ತೊಟ್ಟಿದ್ದಾರೆ. ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸು-ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಇದು ಅಕ್ಷರಶಃ ದೇಶದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಭಾರತದ ಉದ್ದಗಲಕ್ಕೂ ಎಲ್ಲರೂ ಒಪ್ಪಿಕೊಳ್ಳುವ ಏಕಮೇವ ನಾಯಕ ನರೇಂದ್ರ ಮೋದಿಯವರು ಎನ್ನುವುದು ಪುನರ್ ಸ್ಥಾಪನೆಯಾಗಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವೂ ಸೇರಿದಂತೆ ಸಧೃಢ ರಾಜ್ಯ ಮತ್ತು ದೇಶ ಕಟ್ಟಲು ಸಂಕಲ್ಪವನ್ನು ಇಂದು ತೊಟ್ಟಿದ್ದೇವೆ. ಇನ್ನಷ್ಟು ಶಕ್ತಿ, ಶ್ರಮದಿಂದ ಕರ್ನಾಟಕ ಕಟ್ಟುವ ಉತ್ಸಾಹ, ಪ್ರೋತ್ಸಾಹ, ಪ್ರೇರಣೆಯನ್ನು ಚುನಾವಣೆ ನಮಗೆ ಕೊಟ್ಟಿದೆ.

ಏಪ್ರಿಲ್‌ನಲ್ಲಿ ಪ್ರಧಾನಿಗಳು ಕರ್ನಾಟಕಕ್ಕೆ:
ಏಪ್ರಿಲ್‌ನಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬರಲಿದ್ದಾರೆ. ಬರುವ ಸಂದರ್ಭದಲ್ಲಿ ಒಂದು ವರ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅವರ ಮುಖಾಂತರ ಅನಾವರಣ ಮಾಡುವ ಕೆಲಸವನ್ನು ಮಾಡಲಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು