ಬೆಂಗಳೂರು: ಕೊರೊನಾವೈರಸ್ ಸಾಂಕ್ರಾಮಿಕ ಆರಂಭದಿಂದಲೂ ಕರ್ನಾಟಕದಲ್ಲಿ ಸೋಂಕು ತಪಾಸಣೆಯನ್ನು ಶರವೇಗದಲ್ಲಿ ನಡೆಸಲಾಗುತ್ತಿದೆ.ಕರ್ನಾಟಕದಲ್ಲಿ ಕೊವಿಡ್-19 ಹೂಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚುತ್ತಿರುವುದರ ಮಧ್ಯೆ ಒಂದೇ ದಿನ 2 ಲಕ್ಷ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ.
ರಾಜ್ಯದಲ್ಲಿ ಈವರೆಗೂ 5.73 ಕೋಟಿ ಜನರಿಗೆ ಕೊವಿಡ್-19 ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ 69,952 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,33,308 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 2,03,260 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,08,28,304 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ.