ಕಾಂಗ್ರೆಸ್ ನವರು ಬುರುಡೆ ಬಿಡುವುದರಲ್ಲಿ ನಂಬರ್ ಒನ್: ಡಿ.ವಿ.ಸದಾನಂದ ಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಯಾವುದೇ ಜನಪರ ಯೋಜನೆ ಕೈಗೆತ್ತಿಕೊಂಡರೂ ಕಾಂಗ್ರೆಸ್ ನವರು ವಿರೋಧಿಸಿ, ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಿಡಿಕಾರಿದರು.

ಶನಿವಾರ ನಗರದಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಕೊರೋನಾ ಲಸಿಕೆ ವಿರುದ್ಧ ಅಪಪ್ರಚಾರ ಮಾಡಿ, ಜನರಲ್ಲಿ ಗೊಂದಲ ಮೂಡಿಸಿದರು, ಆದರೆ ಅವರೇ ಮೊದಲು ಲಸಿಕೆ ಯನ್ನು ಪಡೆದರು. ಈಗ ಮಾಡಲು ಬೇರೆ ಕೆಲಸ ವಿಲ್ಲದ ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ, ಬುರುಡೆ ಬಿಡುತ್ತಿದ್ದಾರೆ ಎಂದರು.

ಪ್ರತಿಯೊಬ್ಬ ರು ಸ್ವಾಭಿಮಾನಿಗಳಾಗಿ, ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲಬೇಕು. ಆ ಮೂಲಕ ಸ್ವಾವಲಂಬಿ, ಸ್ವಾಭಿಮಾನ ಭಾರತ ನಿರ್ಮಾಣ ಮಾಡಬೇಕು. ಹಾಗಾದರೆ ಮಾತ್ರ ಭಾರತ ಯಶಸ್ವಿ ರಾಷ್ಟ್ರವಾಗಲು ಸಾಧ್ಯ ವಾಗುತ್ತದೆ ಎಂದು ತಿಳಿಸಿದರು.

ಭಾರತ ಆತ್ಮನಿರ್ಭರ, ಸ್ವಾಭಿಮಾನಿ ದೇಶವಾಗಬೇಕಾದರೆ, ಗ್ರಾಮಮಟ್ಟದಲ್ಲಿ ಜನಪ್ರತಿನಿಧಿಗಳು ಗ್ರಾಮ ಸೇವಕರಾಗಿ ಜವಾಬ್ದಾರಿ ಯಿಂದ ಕೆಲಸ ಮಾಡಬೇಕು. ಗ್ರಾ.ಪಂ ಸದಸ್ಯರು ಪ್ರತಿ ಮನೆಗೆ ನೀರು, ವಿದ್ಯುತ್, ಸೋಲಾರ್ ಲೈಟ್ ಅಳವಡಿಕೆ ಮುಂತಾದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

Sneha Gowda

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

3 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

19 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

43 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

54 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago