ಬೆಂಗಳೂರು : ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ (RL Jalappa) ನಿಧನರಾಗಿದ್ದಾರೆ.ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಳಲುತ್ತಿದ್ದ ಅವರು ಡಿ.10ರಂದು ಕೋಲಾರದ(olar) ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು.
ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.
ಈ ವರ್ಷದ ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕತ್ಸೆ ಮಾಡಲಾಗಿತ್ತು.ರಾಜ್ಯದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ(Chikkaballapur) ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು.