ಬೆಂಗಳೂರು: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪನಾ ಅವರು ರಾಜೀನಾಮೆ ನೀಡಿದ್ದಾರೆ. ರೋಹಿತ್ ಚಕ್ರತೀರ್ಥ ಅವರನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರೋದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಅಲ್ಲದೇ ಅವರನ್ನು ಈ ಕೂಡಲೇ ವಜಾಗೊಳಿಸುವಂತೆಯೂ ಎಲ್ಲೆಡೆ ಆಗ್ರಹಗಳು ಕೇಳಿಬರುತ್ತಿದೆ. ಈವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಇದೀಗ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.